ಚಿತ್ರದುರ್ಗ : ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಈ ಮಧ್ಯೆ ಜಿಲ್ಲೆಯ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಅವರ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೇ, ಅವರ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಹಿರಿಯೂರಿನಲ್ಲಿರುವ ಅಭ್ಯರ್ಥಿಯ ಮನೆಯ ಮೇಲೆ 6 ಜನರ ಐಟಿ ಅಧಿಕಾರಿಗಳು ದಾಳಿ ನಡೆಸಿ, ರವೀಂದ್ರಪ್ಪ ಪತ್ನಿ ಲತಾ ಅವರನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅವರನ್ನು ಶ್ವೇತಾ ಅವರನ್ನು ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ರವೀಂದ್ರಪ್ಪ ಅವರ ಮನೆಯ ಮೇಲೆ ಏ. 28ರಂದು ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸಾಕಷ್ಟು ದಾಖಲೆಗಳು ಲಭ್ಯವಾಗಿದ್ದು, ಅಧಿಕಾರಿಗಳು ಏ. 28ರಂದು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸಾಕಷ್ಟು ದಾಖಲೆಗಳು ಸಿಕ್ಕಿದ್ದವು. ಹೀಗಾಗಿ ರವೀಂದ್ರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು.
ಆದರೆ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೆ ದಾಳಿ ನಡೆಸಿದ ಅಧಿಕಾರಿಗಳು ಪರಶೀಲನೆ ನಡೆಸಿ, ಲತಾ ಅವರನ್ನು ವಶಕ್ಕೆ ಪಡೆದಿರಬಹುದು ಎನ್ನಲಾಗುತ್ತಿದೆ.








