ದ್ವಿತೀಯ ವರ್ಷದ ಪಿಯುಸಿ ಸಿಬಿಎಸ್ಇ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶವನ್ನು cbseresults.nic.in ಅಧಿಕೃತ ವೆಬ್ಸೈಟ್ ಅಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಘೋಷಿಸಿದೆ.
ಫೆಬ್ರವರಿ 15 ರಿಂದ ಏಪ್ರಿಲ್ 5, 2023 ವರೆಗೆ ಪರೀಕ್ಷೆಗಳು ನಡೆದಿದ್ದವು. ಈ ಬಾರಿ ಸುಮಾರು 39 ಲಕ್ಷ ವಿದ್ಯಾರ್ಥಿಗಳು CBSE ಬೋರ್ಡ್ ಪರೀಕ್ಷೆಗಳಲ್ಲಿ ಕಾಣಿಸಿಕೊಂಡಿದ್ದರು.
ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಅಧಿಕೃತ cbseresults.nic.in ಅಧಿಕೃತ ವೆಬ್ಸೈಟ್ ಅಲ್ಲಿ ಪ್ರಕಟವಾಗಿದೆ. ಈ ಬಾರಿ 12ನೇ ತರಗತಿ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎನ್ನಲಾಗಿದೆದ್ದು, ಅಲ್ಲಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ಗೆ ಕೊನೆಯ ಸ್ಥಾನದಲ್ಲಿದೆ. ಪ್ರಯಾಗ್ರಾಜ್ ವ್ಯಾಪ್ತಿಯಲ್ಲಿ ಶೇ.78ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.








