ಬೆಂಗಳೂರು : ಹಾಜರಾತಿ ಕೊರತೆಯಿಂದ 2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಹಾಗೂ ವಾಣಿಜ್ಯ ವಿಭಾಗದ ಪಿಯುಸಿ (PUC) ವಿದ್ಯಾರ್ಥಿಗಳಿಗೆ ಮೇ. 23ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.
ಪಿಯುಸಿ ದ್ವೀತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ. 75ರಷ್ಟು ಹಾಜರಾತಿ ಇಲ್ಲದ ಕಾರಣಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗದಿಂದ 12 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಮುಖ್ಯ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾತ್ರ ಮಂಡಳಿ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.








