ರಾಯಚೂರು : ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ನೀಡಿತ್ತು. ಹೀಗಾಗಿ ವಿದ್ಯುತ್ ಬಿಲ್ ಕಟ್ಟಿಕೊಳ್ಳುವವರಿಗೆ ಸಂಕಷ್ಟ ಶುರುವಾಗಿದೆ.
ಹೀಗೆ ವಿದ್ಯುತ್ ಬಿಲ್ ನೀಡಲು ಬಂದ ಜೆಸ್ಕಾಂ (GESCOM) ಸಿಬ್ಬಂದಿಗೆ ಗೃಹಿಣಿಯೊಬ್ಬರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಬಸನಗೌಡ ತುರುವಿಹಾಳ ಕರೆಂಟ್ ಬಿಲ್ ಕಟ್ಟಬೇಡ ಎಂದಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬಂದಾಗ ಗ್ಯಾರೆಂಟಿ ಕಾರ್ಡ್ ಕೊಟ್ಟು ಹೋಗಿದ್ದಾರೆ. ಅವರು ಗೆಲ್ಲುವರಿಗೆ ಒಂದು, ಗೆದ್ದ ಮೇಲೆ ಇನ್ನೊಂದಾ? ನಾವು ಬಿಲ್ ಕಟ್ಟುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಸ್ಕಾಂ ಸಿಬ್ಬಂದಿಯನ್ನು ಮಹಿಳೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ಗಳಲ್ಲೂ ಫ್ರೀ ಓಡಾಡಬೇಕು. ಕಾಂಗ್ರೆಸ್ ಸರ್ಕಾರ ಬಂದಿದೆ ಎಂದು ಮಹಿಳೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ವಿದ್ಯುತ್ ನೀಡುವುದು ಕಾಂಗ್ರೆಸ್ ನ ಘೋಷಣೆಯಾಗಿದೆ.








