ಇನ್ನೂ ಕೇವಲ ಮೂರೇ ದಿನಗಳಲ್ಲಿ ರಾಜ್ಯಕ್ಕೆ ಮಳೆಗಾಲ ಎಂಟ್ರಿ ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ ಕರಾವಳಿಯಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆಯ ವಾತಾವರಣವೇ ಮುಂದುವರಿಯಲಿದೆ. ಈ ಪೈಕಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ ಬರಲಿದೆ. ಅದರಲ್ಲಿ ಆರಂಭಿಕ ಮೂರು ದಿನ ತುಂತುರು ಮಳೆಯಾಗಲಿದೆ. ಮೇ 21ರಿಂದ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಆಗಾಗ ತುಂತುರು ಮಲೆ ಕಾಣಿಸಿಕೊಳ್ಳಲಿದೆ. ಕರಾವಳಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಮಳೆ ಬರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








