ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ(Dr. Bhujanga Shetty) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಅವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿವೆ.
ಲಕ್ಷಾಂತರ ಕಣ್ಣುಗಳನ್ನ ದಾನ ಮಾಡುವ ಮೂಲಕ ನೇತ್ರದಾನ (Eye Donate) ದ ಕ್ರಾಂತಿಯನ್ನೇ ಮಾಡಿದ್ದ ನೇತ್ರ ತಜ್ಞರೇ ಈಗ ನೇತ್ರದಾನ ಮಾಡಿದ್ದಾರೆ. ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನು ನೀಗಿಸಿದ್ದರು. ತಡರಾತ್ರಿ ಡಾ. ರಾಜ್ ಕುಮಾರ್ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಲಾಗಿದೆ. ನೇತ್ರದಾನ ಮಾಡುವ ಮೂಲಕ ಭುಜಂಗ ಶೆಟ್ಟಿಯವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ನಿನ್ನೆ ಸಂಜೆ ಮನೆಯಲ್ಲಿದ್ದಾಗ ಡಾ. ಭುಜಂಗ ಶೆಟ್ಟಿ ಅವರಿಗೆ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.








