ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಸಾಕಷ್ಟು ಕುತೂಹಲ ಕೆರಳಿಸಿದ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಜೆಡಿಎಸ್ ಬ್ರೇಕ್ ಹಾಕಿದೆ. ಆ ಮೂಲಕ ತನ್ನ ಅಭ್ಯರ್ಥಿಯನ್ನಾಗಿ ಕೋಲಾರ ಮೂಲದ ಉದ್ಯಮಿ ನಿಸರ್ಗ ಗೋವಿಂದರಾಜ್ ಆಯ್ಕೆ ಮಾಡಿದೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುವ ಕಾರಣಕ್ಕೆ ಇಂದೇ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡರಿಂದ ಬಿ ಫಾರಂ ಪಡೆದು ಗೋವಿಂದರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಉಪ ಸಭಾದ್ಯಕ್ಷ ಕೃಷ್ಣರೆಡ್ಡಿ, ಕೋಲಾರದ ಶಾಸಕ ಶ್ರೀನಿವಾಸ ಗೌಡ ಉಪಸ್ಥಿತರಿದ್ದರು








