ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ (Guest Teachers) ನೇಮಕಕ್ಕೆ ತೀರ್ಮಾನಿಸಲಾಗಿದೆ.
ಹೀಗಾಗಿ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. 15 ಸಾವಿರ ಪದವಿದರ ಶಿಕ್ಷಕರ ನೇಮಕಾತಿ ಕೊನೆಯ ಹಂತದ ಪ್ರಕ್ರಿಯೇ ಇನ್ನೂ ಚಾಲ್ತಿಯಲ್ಲಿರುವಾಗಲೇ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಇಲಾಖೆ ಮುಂದಾಗಿದೆ.








