ಮೈಸೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜೊತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಅಮೂಲ್ಯ “ಪಾಕಿಸ್ತಾನ ಜಿಂದಾಬಾದ್ ಘೋಷಣೆ” ಬಗ್ಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. ಇದರ ಹಿಂದೆ ಇರುವ ಸಂಘಟನೆಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು. ಇನ್ನು ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಕೊನೆಯಾಗುವುದಿಲ್ಲ. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ವ್ಯವಸ್ಥಿತ ಸಂಚು ಇದರ ಹಿಂದೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








