ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂ. 9ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಆಗಮಿಸುವ ಕಾಲ ಸನಿಹ ಬಂದಿದ್ದರೂ ರಾಜ್ಯದಲ್ಲಿ ಬಿಸಿಲಿನ ಬೇಗೆ ತಪ್ಪುತ್ತಿಲ್ಲ. ಕಲಬುರಗಿಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಹಗುರ ಮಳೆಯಾಗುವ ಸಾಧ್ಯತೆ ಇದೆ.








