ಮನೆ, ಜಮೀನು, ಜಾಗ ಖರೀದಿಸುವವರು ತಮ್ಮ ಪ್ರಕ್ರಿಯೆ ಮುಗಿಸಿಕೊಳ್ಳುವುದು ಮುಖ್ಯವಾಗಿದೆ. ಏಕೆಂದರೆ ಸದ್ಯದಲ್ಲಿಯೇ ಭೂಮಿಯ ಮಾರ್ಗಸೂಚಿ ದರ ಹೆಚ್ಚಳವಾಗಲಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ ಮಾರ್ಗಸೂಚಿ ದರ ಹೆಚ್ಚಳಕ್ಕೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ವರ್ಷ ಮಾರ್ಗಸೂಚಿ ದರ ಹೆಚ್ಚಳ ಮಾಡಲಾಗುತ್ತದೆ. ಆದರೆ, ಕೊರೊನಾದ ಹಿನ್ನೆಲೆಯಲ್ಲ 2019ರಿಂದ ಮಾರ್ಗಸೂಚಿ ದರ ಹೆಚ್ಚಳ ಮಾಡಿಲ್ಲ. ಕಳೆದ ಎರಡು ವರ್ಷ ಶೇ. 10ರಷ್ಟು ಮಾರ್ಗಸೂಚಿ ದರ ಇಳಿಕೆ ಮಾಡಲಾಗಿತ್ತು.
ಈ ಬಾರಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಾರ್ಗಸೂಚಿ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತಿದೆ. ಹೀಗಾಗಿ ಶೇ. 20ರಿಂದ ಶೇ. 40ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮಾರ್ಗಸೂಚಿ ದರ ಹೆಚ್ಚಳವಾದಲ್ಲಿ ಸಹಜವಾಗಿ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಹೆಚ್ಚಳವಾಗಲಿದೆ. ಆಸ್ತಿ ಖರೀದಿ ಬೆಲೆ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.