ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Team India: ಗಾಯದಿಂದ ಗುಣಮುಖರಾಗಿ ತಂಡಕ್ಕೆ ಮರಳುವ ಉತ್ಸುಕದಲ್ಲಿ ಸ್ಟಾರ್‌ ಆಟಗಾರರು

ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತ ತಂಡ ಸೇರಲಿರುವ ಆಟಗಾರರು

Author2 by Author2
June 16, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಗಾಯದ ಸಮಸ್ಯೆ ಕಾರಣದಿಂದ ಕಳೆದ ಕೆಲವು ತಿಂಗಳಿಂದ ಕ್ರಿಕೆಟ್‌ನಿಂದ ದೂರ ಉಳಿದಿರುವ ಟೀಂ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರು ತಂಡಕ್ಕೆ ವಾಪಸ್ಸಾಗುವ ತವಕದಲ್ಲಿದ್ದಾರೆ.

ಟೀಂ ಇಂಡಿಯಾದ ಪ್ರಮುಖ ಆಟಗಾರರಾದ ಕೆಎಲ್ ರಾಹುಲ್, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ ಹಾಗೂ ಶ್ರೇಯಸ್ ಅಯ್ಯರ್ ಅವರುಗಳು ಗಾಯದ ಸಮಸ್ಯೆಯಿಂದಾಗಿ ಕಳೆದ ಹಲವು ತಿಂಗಳುಗಳಿಂದ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ನಾಲ್ವರು ಆಟಗಾರರು ಇದೀಗ ಮಹತ್ವದ ಪಂದ್ಯಾವಳಿಗೆ ತಂಡದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ತಯಾರಿ ಆರಂಭಿಸಿದ್ದಾರೆ.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

July 28, 2026

ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ತೀವ್ರ ಗಾಯದ ಸಮಸ್ಯೆಯಿಂದ 2022ರ ಸೆಪ್ಟೆಂಬರ್‌ನಿಂದಲೂ ತಂಡದಿಂದ ಹೊರಗುಳಿದಿದ್ದಾರೆ. ಈಗಾಗಲೇ 2022ರಲ್ಲಿ ನಡೆದ ಟಿ20 ವಿಶ್ವಕಪ್‌, ಪ್ರಸಕ್ತ ವರ್ಷದಲ್ಲಿ ನಡೆದ ಐಪಿಎಲ್‌, ವಿಶ್ವ ಟೆಸ್ಟ್‌ ಚಾಂಪಿಯನ್ಷಿಪ್‌ ಫೈನಲ್‌ ಪಂದ್ಯಗಳಲ್ಲಿ ಆಡುವ ಅವಕಾಶ ಕಳೆದುಕೊಂಡಿರುವ ಬುಮ್ರಾ ತಂಡಕ್ಕೆ ಮರಳುವ ಬಗ್ಗೆ ಸಾಕಷ್ಟು ನಿರೀಕ್ಷೆ ಎದುರಾಗಿದೆ. ಇದಕ್ಕಾಗಿ ಈಗಾಗಲೇ ಕಠಿಣ ಅಭ್ಯಾಸ ನಡೆಸುತ್ತಿರುವ ಸ್ಟಾರ್ ವೇಗದ ಬೌಲರ್‌, ಮುಂಬರುವ ಏಷ್ಯಾಕಪ್‌ ವೇಳೆಗೆ ತಂಡಕ್ಕೆ ಮರಳುವ ಸಾಧ್ಯತೆ ಹೆಚ್ಷಿದೆ.

ಪ್ರಸಕ್ತ ವರ್ಷದ ಐಪಿಎಲ್ ಆರಂಭಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ ಭಾರತ ತಂಡದ‌ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಸಹ ಕಮ್ ಬ್ಯಾಕ್ ಹಾದಿಯಲ್ಲಿದ್ದಾರೆ. ಪ್ರಸಕ್ತ ವರ್ಷದ ಆರಂಭದಲ್ಲಿ ನಡೆದ ಕೆಲವು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅಯ್ಯರ್, ನಂತರದಲ್ಲಿ ಗಾಯದ ಸಮಸ್ಯೆಗೆ ಸಿಲುಕಿದರು. ಹೀಗಾಗಿ ಐಪಿಎಲ್ ಸೇರಿದಂತೆ ಹಲವು ಪಂದ್ಯಾವಳಿಯಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಕೂಡ ತಂಡಕ್ಕೆ ಮರಳುವ ಲೆಕ್ಕಾಚಾರ ಹೊಂದಿದ್ದು, ಇದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ.

ಇವರೊಂದಿಗೆ ಭಾರತದ ತಂಡದ ಆರಂಭಿಕ ಬ್ಯಾಟರ್ ಆಗಿ ಮಿಂಚಿದ್ದ ಕನ್ನಡಿಗ ಕೆಎಲ್‌ ರಾಹುಲ್ ಸಹ ತಂಡಕ್ಕೆ ಮರಳುವ ಉತ್ಸಾಹದಲ್ಲಿದ್ದಾರೆ. ‌ಕಳೆದ ಐಪಿಎಲ್ ಟೂರ್ನಿಯಲ್ಲಿ ಗಾಯಗೊಂಡು ಟೂರ್ನಿಯ ಕೊನೆ ಹಂತದಲ್ಲಿ ಹೊರಗುಳಿದಿದ್ದ ರಾಹುಲ್, ಬಳಿಕ ಯುಕೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಇದೀಗ ಬೆಂಗಳೂರಿಗೆ ಹಿಂದಿರುಗಿರುವ ಕನ್ನಡಿಗ, ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಆರಂಭಿಸಿದ್ದು, ಆಗಸ್ಟ್ ಅಂತ್ಯದಲ್ಲಿ ನಡೆಯುವ ಏಷ್ಯಾಕಪ್ ವೇಳೆಗೆ ತಂಡಕ್ಕೆ ಮರಳುವ ನಿರೀಕ್ಷೆ ಹೊಂದಿದ್ದಾರೆ.

ಇನ್ನೂ ಕಳೆದ ವರ್ಷಾಂತ್ಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಡದಿಂದ ಹೊರಗುಳಿದಿರುವ ರಿಷಭ್ ಪಂತ್ ಸಹ ಕಮ್‌ಬ್ಯಾಕ್‌ ಹಾದಿಯಲ್ಲಿದ್ದಾರೆ. ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್‌ಮನ್‌ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ‌ ಏಷ್ಯಾಕಪ್‌ ಟೂರ್ನಿ ವೇಳೆಗೆ ಪಂತ್‌ ಗುಣಮುಖ ಹೊಂದುವ ಸಾಧ್ಯತೆ ಕಡಿಮೆ ಇದ್ದರೂ, ಮುಂಬರುವ ವಿಶ್ವಕಪ್ ವೇಳೆಗೆ ಸಂಪೂರ್ಣ ಗುಣಮುಖರಾಗಿ ತಂಡಕ್ಕೆ ಮರಳುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದಾರೆ. ಬಿಸಿಸಿಐ ಸಹ ಪಂತ್ ಅವರನ್ನ ಏಕದಿನ ವಿಶ್ವಕಪ್‌ನಲ್ಲಿ ಆಡಿಸುವ ನಿರೀಕ್ಷೆಯಲ್ಲಿದೆ.

Tags: Team India: Star players eager to recover from injuries and return to the team
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram