ಯಾದಗಿರಿ : ಕೆಎಸ್ ಆರ್ ಟಿಸಿ ಬಸ್ (BUS) ನಿಲ್ಲಿಸಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.
ಸುರಪುರದಿಂದ ಯಾದಗಿರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಸಾಕಷ್ಟು ಪ್ರಮಾಣದಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಭರ್ತಿಯಾಗಿತ್ತು. ಹೀಗಾಗಿ ಚಾಲಕ ಬಸ್ ನಿಲ್ಲಿಸಿರಲಿಲ್ಲ. ಇದೇ ಕಾರಣಕ್ಕೆ ನಶೆಯಲ್ಲಿದ್ದ ವ್ಯಕ್ತಿ ಡ್ರೈವರ್ ಹಾಗೂ ಕಂಡಕ್ಟರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ನಿಂಗಣ್ಣ ಹಲ್ಲೆಗೊಳಗಾದ ಚಾಲಕನಾಗಿದ್ದು, ಚಂದಪ್ಪ ಕುಡಿದ ನಶೆಯಲ್ಲಿ ಹಲ್ಲೆ ಮಾಡಿದ ವ್ಯಕ್ತಿ ಎನ್ನಲಾಗಿದೆ.
ಚಾಲಕನಿಗೆ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








