ಆಸ್ಟ್ರೇಲಿಯಾ ವಿರುದ್ಧ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಸೋಲಿನ ಬಳಿಕ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಆಟಗಾರರು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದು, ಭಾರತ ತಂಡದ ನಾಯಕ ರೋಹಿತ್ ಶರ್ಮ ಸಹ ಫ್ಯಾಮಿಲಿಯೊಂದಿಗೆ ಕಾಲ ಕಳೆಯುತ್ತಿದ್ದಾರೆ.
ಲಂಡನ್ನ ಓವಲ್ನಲ್ಲಿ ನಡೆದ ಫೈನಲ್ನಲ್ಲಿ ಎದುರಾದ ಸೋಲು ಟೀಂ ಇಂಡಿಯಾ ಆಟಗಾರರಲ್ಲಿ ಸಾಕಷ್ಟು ನಿರಾಸೆ ಮೂಡಿಸಿತ್ತು. ಫೈನಲ್ನ ಬಳಿಕ ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್ ಶರ್ಮ, ಪತ್ನಿ ಹಾಗೂ ಮಗಳ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಕ್ರಿಕೆಟ್ನಿಂದ ಸಂಪೂರ್ಣ ವಿಶ್ರಾಂತಿಯಲ್ಲಿರುವ ಹಿಟ್ ಮ್ಯಾನ್, ಸಂಪೂರ್ಣ ಕಾಲವನ್ನ ಪತ್ನಿ ಹಾಗೂ ಮಗಳೊಂದಿಗೆ ಕಳೆಯುತ್ತಿದ್ದಾರೆ.
ಹೀಗಾಗಿ ಇತ್ತೀಚೆಗಷ್ಟೇ ಡಿಸ್ನಿಲ್ಯಾಂಡ್ಗೆ ಭೇಟಿ ನೀಡಿದ್ದ ರೋಹಿತ್ ಶರ್ಮ, ಮಗಳು ಸಮೀರ ಜೊತೆಗಿರುವ ಮುದ್ದಾದ ವಿಡಿಯೋವೊಂದನ್ನ ಹಂಚಿಕೊಂಡಿದ್ದಾರೆ. ರೋಹಿತ್ ಶರ್ಮ ಹಂಚಿಕೊಂಡಿರುವ ವಿಡಿಯೋಗೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ಗಳು ಸಹ ಬಂದಿವೆ.
ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರು ಜುಲೈನಲ್ಲಿ ಮುಂದಿನ ಪ್ರವಾಸವನ್ನ ಕೈಗೊಳ್ಳಲಿದ್ದಾರೆ.
ಮೊದಲ ವಾರದಲ್ಲಿ ವೆಸ್ಟ್ ಇಂಡೀಸ್ಗೆ ತೆರಳಲಿರುವ ಭಾರತ ತಂಡ, ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳನ್ನಾಡಲಿದೆ. ಈ ನಡುವೆ ವಿಂಡೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟವಾಗಬೇಕಿದ್ದು, ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಗೆ ವಿಶ್ರಾಂತಿ ನೀಡುವ ಸಾಧ್ಯತೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.








