ಬೆಂಗಳೂರಿನ ರಾಜಭವನಕ್ಕೆ ತೆರಳಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಸರ್ಕಾರ ಗೋ ಹತ್ಯೆ ನಿಷೇಧ ರದ್ದು ಮಾಡಲು ಮುಂದಾಗಿದೆ. ಮತಾಂತರ ನಿಷೇಧ ಕಾಯ್ದೆಗೆ ತೆಲವು ತಿದ್ದುಪಡಿ ತರಲು ಹೊರಟಿದೆ. ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪುಸ್ತಕದಿಂದ ತೆಗೆಯಲು ಮುಂದಾಗಿದೆ ಎಂದು ದೂರಿದ್ದಾರೆ. ಸರ್ಕಾರವು ರೈತರಿಗೆ ಅನ್ಯಾಯ ಮಾಡಿ ಮುಸ್ಲಿಂ ಹಾಗೂ ಸೋನಿಯಾ ಗಾಂಧಿ ಅವರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಿದೆ. ನಾವು ಇದನ್ನು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಒಂದು ವೇಳೆ ಇವುಗಳ ಬದಲಾವಣೆಗೆ ಕೈ ಹಾಕಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.








