ನವದೆಹಲಿ: ಕೇಂದ್ರ ಸರ್ಕಾರವು ಬಂಡವಾಳ ಹೂಡಿಕೆ (Capital Investment)ಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳಿಗೆ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯಡಿ ವಿಶೇಷ ನೆರವು ಘೋಷಿಸಿದೆ.
16 ರಾಜ್ಯಗಳಿಗೆ ಒಟ್ಟು 56,415 ಕೋಟಿ ರೂ. ವಿಶೇಷ ನೆರವು (Special Assistance) ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆಗೆ ಅನುಮೋದಿಸಲಾಗಿದೆ.
ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ವಸತಿ ಹೆಚ್ಚಿಸುವ ಹಾಗೂ ಇನ್ನೂ ಅನೇಕ ಗುರಿಗಳನ್ನು ಇದು ಹೊಂದಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಕರ್ನಾಟಕಕ್ಕೆ 3,647 ಕೋಟಿ ರೂಪಾಯಿ ವಿಶೇಷ ಸಹಾಯ ಘೋಷಣೆ ಮಾಡಲಾಗಿದೆ. ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ.








