ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.








