ಬೆಂಗಳೂರಿನ ಮೈಕೋ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಕಳ್ಳರನ್ನು ಬಂಧಿಸಿದ್ದಾರೆ.
ಬಂಧಿತರಿಂದ 33 ಲ್ಯಾಪ್ ಟಾಪ್, 40 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಹುಡುಕಾಟಕ್ಕಾಗಿ ಪೊಲೀಸರು ಬರೋಬ್ಬರಿ 80 ಸಿಸಿಟಿವಿ ಕ್ಯಾಮೆರಾಗಳನ್ನು ಹುಡುಕಾಡಿದ್ದರು. ಅಷ್ಟೇ ಅಲ್ಲದೇ, ಮಡಿವಾಳ ಪೊಲೀಸರೂ ಕೂಡ ಈ ಆರೋಪಿಗಳಿಂದ ಬರೋಬ್ಬರಿ 120 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ರಿಂದಲೂ 120 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಸಂತೋಷ್, ಅಭಿಲಾಷ್, ಶ್ರೀನಿವಾಸ್ ಎಂಬುವವರನ್ನು ಬಂಧಿಸಲಾಗಿದೆ.
ಈ ಕುರಿತು ಮಾತನಾಡಿದ ನಗರ ಪೊಲೀಸ್ ಆಯಕ್ತ ದಯಾನಂದ, ಆಗ್ನೇಯ ವಿಭಾಗದ ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ. ಲ್ಯಾಪ್ ಟಾಪ್ ಕಳ್ಳಥನ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ. ಇವರ ವಿರುದ್ಧ ಒಟ್ಟು 8 ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದವು. ಆರೋಪಿಗಳು ತಮಿಳುನಾಡು ಮೂಲದವರು ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ








