ಮಂಗಳೂರು : ತಲೆಗೆ ಗುಂಡು ಹಾರಿಸಿಕೊಂಡು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸುಳ್ಯ (Sullia) ತಾಲೂಕಿನ ಉಬರಡ್ಕ (Ubaradka) ಎಂಬಲ್ಲಿ ನಡೆದಿದೆ.
ಜಿಲ್ಲೆಯ ಅರಂತೋಡು ನಿವಾಸಿ ರವಿ (32) ಯುವಕನೇ ಸಾವನ್ನಪ್ಪಿದವ. ಈ ಯುವಕ ಉಬರಡ್ಕ ಗ್ರಾಮದ ಬೆಳ್ರಂಪಾಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆಂದು ಹೋಗಿದ್ದ ಯುವಕ ಮಂಗಳವಾರ ರಾತ್ರಿ ಮನೆಯಿಂದ ಕೋವಿ ತೆಗೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಕುಡಿತದ ಚಟ ಹೊಂದಿದ್ದ. ಇದೊಂದು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.








