ರಾಯಚೂರು: ಬಿಸಿಯೂಟದಲ್ಲಿ (Lunch) ಹಲ್ಲಿ (Lizard) ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು (Raichur) ತಾಲೂಕಿನ ಅಪ್ಪನದೊಡ್ಡಿ (Appanadoddi) ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿಯೇ ಈ ಘಟನೆ ನಡೆದಿದ್ದು, ಈ ಊಟ ಸೇವಿಸಿದ್ದ ಸುಮಾರು 50 ಜನ ಮಕ್ಕಳು ಅಸ್ವಸ್ಥರಾಗಿದ್ದಾರೆ. ಈ ಪೈಕಿ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಮಧ್ಯಾಹ್ನ ಬಿಸಿಯೂಟಕ್ಕೆ ಉಪ್ಪಿಟ್ಟು ಮಾಡಲಾಗಿತ್ತು. ಊಟ ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾಗಿದ್ದು, ಅಡುಗೆ ಪಾತ್ರೆಯ ತಳದಲ್ಲಿ ಹಲ್ಲಿ ಪತ್ತೆಯಾಗಿದೆ. ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಮಕ್ಕಳನ್ನು ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಂತರ ಅಡುಗೆ ಸಿಬ್ಬಂದಿಯನ್ನು ವಜಾ (Dissmiss) ಮಾಡಲಾಗಿದೆ. ಶಾಲೆಯ ಮುಖ್ಯೋಪಾಧ್ಯಾಯರು ಸೇರಿ ಮೂರು ಜನ ಶಿಕ್ಷಕರಿಗೆ ನೋಟೀಸ್ ನೀಡಿ ತಾತ್ಕಾಲಿಕವಾಗಿ ಬೇರೆಡೆ ನಿಯೋಜನೆ ಮಾಡಲಾಗಿದೆ ಎಂದು ಡಿಡಿಪಿಐ ವೃಷಭೇಂದ್ರಯ್ಯ ತಿಳಿಸಿದ್ದಾರೆ. ಗ್ರಾಮಸ್ಥರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ.








