ನಾಳೆಯಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಮಾತನಾಡಲಿದ್ದಾರೆ. ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ.
ಬಿಜೆಪಿ ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸೇರಿದಂತೆ ಆರೋಪ- ಪ್ರತ್ಯಾರೋಪ ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿವೇಶನದಲ್ಲಿ ಚರ್ಚೆಯಾಗಲಿದೆ. ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು ಮಾಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುವ ಸಾಧ್ಯತೆ ಇದೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 8 ದಿನ ಪ್ರಶ್ನೋತ್ತರ ಕಲಾಪ ನಿಗದಿಯಾಗಿದೆ.








