ಮುಂಬೈ: ಮೇಲ್ಸೇತುವೆಯಿಂದ ಕಾರೊಂದು (Flyover) ರೈಲ್ವೆ ಹಳಿಯ ಮೇಲೆ ಬಿದ್ದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಮಹಾರಾಷ್ಟ್ರ ರಾಜ್ಯದ ನಾಗ್ಪುರದ (Nagpur)ಲ್ಲಿ ನಡೆದಿದೆ. ಇಲ್ಲಿಯ ಬೋರ್ಖೆಡಿ ಮೇಲ್ಸೇತುವೆಯ ಮೇಲಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಕೆಳಗೆ ರೈಲ್ವೆ ಹಳಿಯಿದ್ದು, ವಾಹನ ಸಂಪೂರ್ಣ ನುಜ್ಜುಗೂಜ್ಜಾಗಿದೆ. ಅಲ್ಲದೇ, ಕಾರಿನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕೆ ಬುಟಿಬೋರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








