ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ರಾಜಕೀಯ ಬದ್ಧವೈರಿಗಳು ಎನ್ನುವುದು ಮತ್ತೊಮ್ಮೆ ಜಗಜ್ಜಾಹೀರವಾಗಿದೆ.
ಬೆಂಗಳೂರಿನ (Bengaluru) ಕೇತೋಹಳ್ಳಿಯಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಶಾಖಾ ಮಠದ ಭೂಮಿ ಪೂಜೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಕುರುಬ ಸಮುದಾಯದ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಈಶ್ವರಪ್ಪನವರನ್ನು ಸನ್ಮಾನಿಸಲು ಸಿದ್ದರಾಮಯ್ಯ ಅವರು ನಿರಾಕರಿಸಿದರು.
ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ (niranjanananda Puri Swamiji) ಅವರು ಕೆಎಸ್ ಈಶ್ವರಪ್ಪ ಅವರಿಗೆ ಸನ್ಮಾನಿಸಲು ಸಿಎಂ ಅವರನ್ನು ಕೇಳಿಕೊಂಡರು. ಇದಕ್ಕೆ ಸಿದ್ದರಾಮಯ್ಯ, ನೀವೇ ಸನ್ಮಾನಿಸಿ ಎಂದು ಕೈಸನ್ನೇ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಿದ್ದರಾಮಯ್ಯ ಅವರು ಈಶ್ವರಪ್ಪನವರನ್ನು ಸನ್ಮಾನಿಸಿಸಲು ಬೇಕಂತಲೇ ಹಿಂಜರಿದಿದ್ದಾರೋ ಅಥವಾ ಸಾಮಾನ್ಯವಾಗಿ ನೀವೇ ಮಾಡಿ ಮುಗಿಸಿ ಎನ್ನುವ ಅರ್ಥದಲ್ಲಿ ಕೈಸನ್ನೇ ಮಾಡಿ ಹೇಳಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲ ಈ ವಿಡಿಯೋ ಹಲವಾರು ಚರ್ಚೆಗಳಿಗೆ ಕಾರಣವಾಗಿದೆ








