52 ವರ್ಷದ ವ್ಯಕ್ತಿಯೊಬ್ಬರು ಒಂದು ಮಾವಿನ ಹಣ್ಣು ಕದ್ದು ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿರುವ ಘಟನೆ ಮುಂಬಯಿನ ಕಂಡಿವಲಿ ಪಶ್ಚಿಮದಲ್ಲಿ ನಡೆದಿದೆ.
ಈ ವ್ಯಕ್ತಿ ಮಾವಿನ ಹಣ್ಣು ಕದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಾರಾಟಗಾರ ಆತನ ತಲೆಗೆ ಹೊಡೆದ ಪರಿಣಾಮ ಮಾರಣಾಂತಿಕವಾಗಿ ಹಲ್ಲೆಯಾಗಿದ್ದರಿಂದಾಗಿ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಕೋಪರ್ ಪೊಲೀಸರು ಆರೋಪಿ ಮಾರಟಾಗರನನ್ನು ಬಂಧಿಸಿ, ಎಫ್ ಐಆರ್ ದಾಖಲಿಸಿದ್ದಾರೆ. ಮೃತ ವ್ಯಕ್ತಿ ಮಾರುತಿ ಮೇಧೆ ಕಂಡಿವಲಿ ಪಶ್ಚಿಮದ ಚಾರ್ಕೋಪರ್ ನಿವಾಸಿ ಎಂದು ಗುರುತಿಸಲಾಗಿದೆ.
ಆರೋಪಿ ಸೋನು ಗುಪ್ತಾ ಕಂಡಿವಲಿ ಪಶ್ಚಿಮದ ಚಾರ್ಕೋಪರ್ ನಲ್ಲಿ ಹಣ್ಣಿನ ಅಂಗಡಿ ನಡೆಸುತ್ತಿದ್ದ. ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದಾಗ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಮೇಧೆ ಟಿಬಿ, ನ್ಯುಮೋನಿಯಾ ಹಾಗೂ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ. ಅನಾರೋಗ್ಯ ಹಾಗೂ ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾನೆ. ಹೀಗಾಗಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.








