ನಾಗಾಲ್ಯಾಂಡ್ ನಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭೂ ಕುಸಿತ ಉಂಟಾಗಿದೆ. ವ್ಯಾಪಕ ಮಳೆಯಿಂದಾಗಿ ಗುಡ್ಡದಿಂದ ಬಂಡೆಗಳು ಜಾರಿ ಕಾರುಗಳ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ಚುಮುಕೆಡಿಮಾದಲ್ಲಿ ಭೂಕುಸಿತದಿಂದಾಗಿ ಗುಡ್ಡದಿಂದ ಬೃಹತ್ ಬಂಡೆ ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿದ್ದ ಕಾರುಗಳ ಮೇಲೆ ಬಿದ್ದಿದ್ದು, ಕಾರುಗಳು ನಜ್ಜುಗುಜ್ಜಾಗಿವೆ.
ಈ ಸಂಪೂರ್ಣ ಘಟನೆಯ ಐದು ಸೆಕೆಂಡುಗಳ ವಿಡಿಯೋ ವೈರಲ್ ಆಗುತ್ತಿದೆ. ಈ ಭೀಕರ ಘಟನೆ ರಸ್ತೆಯ ಹಿಂದೆ ನಿಂತಿದ್ದ ಮತ್ತೊಂದು ವಾಹನದ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮತರ ಕುಟುಂಬಗಳಿಗೆ 4 ಲಕ್ಷ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಮತ್ತು ಸಹಾಯವನ್ನು ಒದಗಿಸಲಾಗುತ್ತಿದೆ.








