ಚಾಮರಾಜನಗರ : ಸಹೋದರಿಗೆ ಲೈಂಗಿಕ ಕಿರುಕುಳ ನೀಡಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯ ತೀರ್ಪು ನೀಡಿದೆ.
ಸಹೋದರ ಸಂಬಂಧಿಯಾಗಿದ್ದ ಅಪ್ರಾಪ್ತಳ ಮೇಲೆಗೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿಯನ್ನು ಚಾಮರಾಜನಗರ ತಾಲೂಕಿನ ಗ್ರಾಮವೊಂದರ ಯುವಕ ರಂಗಸ್ವಾಮಿ (21) ಎಂದು ಗುರುತಿಸಲಾಗಿದೆ.
ಈತ 15 ವರ್ಷದ ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಕುರಿತು 2020 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವಕ ಅಪರಾಧ ಎಸಗಿದ್ದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ನಿಶಾರಾಣಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 4 ಲಕ್ಷ ಪರಿಹಾರ ಕೊಡಬೇಕೆಂದು ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದಿಸಿದ್ದರು.








