ಬೆಂಗಳೂರು : ಎಐಸಿಸಿ ಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು 50ರ ವಸಂತಕ್ಕೆ ಕಾಲಿಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ದೇಶದ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸುತ್ತಿದ್ದಾರೆ.
ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ದೇಶದ ಜನ ಸಂಕಷ್ಟಸಲ್ಲಿದ್ದಾರೆ. ಅದಕ್ಕಾಗಿ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕು ಹೇಳಿದ್ದಾರೆ.
ಇನ್ನೂ ರಾಹುಲ್ ಗಾಂಧಿ ಜನ್ಮದಿನದ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹಮದ್ ಅವರು, ರಾಜ್ಯ ಮತ್ತು ಮಜ್ದೂರ್ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಸಚಿನ್ ಮಿಗಾ ಮತ್ತಿತರರು ಭಾಗವಹಿಸಿದ್ದರು.








