ತುಮಕೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ.ನಾವೆಲ್ಲರೂ ಒಗ್ಗಟಾಗಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಇಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಲಿಂಗೈಕೆಯ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ನಮಸ್ಕರಿಸಿ ಆರ್ಶೀವಾದ ಪಡೆದರು. ಇದಾದ ಬಳಿಕ ಸಿದ್ಧಲಿಂಗ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಚಿವರು ಆರ್ಶೀವಾದ ಪಡೆದರು.
ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಬಿ,ಸಿ ಪಾಟೀಲ್, ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ ಎಂದರು. ಇದೆ ವೇಳೆ ಕೃಷಿ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಸರಿಯಾಗಿ ಬರದೆ ಇರುವ ಕಾರಣಕ್ಕೆ ಕೃಷಿ ಚಟುವಟಿಕೆಗಳು ಸ್ವಲ್ಪ ಕುಂಠಿತವಾಗಿದೆ. ಹಾಗಾಗಿ ರೈತರು ಪರ್ಯಾಯ ಬೆಳೆಗಳಿಗಳತ್ತ ವಾಲುತ್ತಿದ್ದಾರೆ, ಅದಕ್ಕೆ ತಕ್ಕ ಹಾಗೆ ಕೃಷಿ ಅಧಿಕಾರಿಗಳಯ ತಯಾರಿ ಮಾಡಿದ್ದಾರೆ.