ಉದಯೋನ್ಮುಖ ತಂಡಗಳ ಏಷ್ಯಾಕಪ್ ಫೈನಲ್ ಪಂದ್ಯವು ಇಂದು ಕೊಲೊಂಬದಲ್ಲಿ ನಡೆಯುತ್ತಿದ್ದು, ಚಾಂಪಿಯನ್ ಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳು ಸಿದ್ಧವಾಗಿವೆ.
ಲೀಗ್ ಹಂತದಲ್ಲಿ ಟೀಂ ಇಂಡಿಯಾ ಎದುರು 8 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದ ಪಾಕಿ ತಂಡ, ಫೈನಲ್ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದರೆ, ಇತ್ತ ಬರೋಬ್ಬರಿ 10 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ತವಕದಲ್ಲಿದೆ. ಯುವ ಪಡೆಯ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಬಲಿಷ್ಠವಾಗಿದೆ. ಅನುಭವಿಗಳ ಮಿಶ್ರಣದಿಂದ ಕೂಡಿರುವ ಪಾಕ್ ಪಡೆಗೆ ಟಾಪ್ ಆರ್ಡರ್ ಕೈಹಿಡಿಯಬೇಕಿದೆ.
ಉಭಯ ತಂಡಗಳ ಫೈನಲ್ ಫೈಟ್ಗೆ ಆತಿಥ್ಯವಹಿಸುತ್ತಿರುವ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನ ಪಿಚ್ ಸ್ಪಿನ್ನರ್ಗಳಿಗೆ ಸ್ವಲ್ಪ ಅನುಕೂಲವಾಗಿದೆ. ಹೀಗಾಗಿ ಉಭಯ ತಂಡಗಳು ಕ್ವಾಲಿಟಿ ಸ್ಪಿನ್ನರ್ಗಳನ್ನು ಹೊಂದಿದ್ದು, ಜಿದ್ದಾಜಿದ್ದಿನ ಕಾಳಗ ನಿರೀಕ್ಷಿಸಬಹುದಾಗಿದೆ. ಮೈದಾನದಲ್ಲಿ ಸರಾಸರಿ ಸ್ಕೋರ್ 240-250 ಆಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡವು 250 ಅಥವಾ ಅದಕ್ಕಿಂತ ಹೆಚ್ಚಿನ ರನ್ ಬಾರಿಸಿದರೆ, ಪಂದ್ಯದಲ್ಲಿ ಮೇಲುಗೈ ಸಾಧಿಸಬಹುದು.