ಭುವನೇಶ್ವರ : ಒಡಿಶಾದ ರೈಲು ದುರಂತ ಸಂಭವಿಸಿ 2 ತಿಂಗಳುಗಳು ಕಳೆದಿವೆ. ಆದರೂ ಇಲ್ಲಿಯವರೆಗೆ 29 ಮೃತದೇಹಗಳ ಗುರುತು ಇದುವರೆಗೆ ಪತ್ತೆಯಾಗಿಲ್ಲ ಎಐಐಎಂಎಸ್ನ (All India Institute of Medical Sciences) ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ತಿಳಿಸಿದ್ದಾರೆ.
ಘಟನೆ ನಡೆದ ನಂತರ, ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿತ್ತು. ಈ ಪೈಕಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ತ ದೇಹಗಳಿಗಾಗಿ ಡಿಎನ್ಎ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ ನಂತರ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.
ರೈಲು ಅಪಘಾತದ ವಿಚಾರಣೆಯ ಮೊದಲ ವರದಿಯಲ್ಲಿ ರೈಲು ದುರಂತಕ್ಕೆ ಸಿಗ್ನಲಿಂಗ್ ಮತ್ತು ಟ್ರಾಫಿಕ್ ಕಂಟ್ರೋಲ್ ವಿಭಾಗಗಳನ್ನು ಹೊಣೆ ಮಾಡಲಾಗಿದೆ. ಈ ಕುರಿತು ರೈಲ್ವೆ ಸಚಿವಾಲಯ ರಾಜ್ಯಸಭೆಯಲ್ಲಿ ವರದಿ ಬಹಿರಂಗ ಪಡಿಸಿತ್ತು. ಸಿಗ್ನಲಿಂಗ್ ದೋಷಗಳ ಪರಿಣಾಮವಾಗಿ ರಾಂಗ್ ಲೈನ್ಗೆ ಹಸಿರು ಸಿಗ್ನಲ್ ಪ್ರದರ್ಶಿಸಲಾಯಿತು. ಇದು ನಿಂತಿದ್ದ ಸರಕು ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಯಿತು ಎಂದು ಹೇಳಲಾಗಿದೆ. ಜೂ.2 ರಂದು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ 288 ಜನ ಸಾವನ್ನಪ್ಪಿದ್ದರು.








