ಬೆಂಗಳೂರು: ನಿನ್ನೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯ ಪರೀಕ್ಷೆ ನಡೆಸಲಾಗಿತ್ತು. ಆದರೆ, ಕೊರೊನಾ ಸೋಂಕಿತರ ಸಂಪರ್ಕ ಹೊಂದಿದ್ದ ಶಂಕೆ ಮೇರೆಗೆ ಬೆಂಗಳೂರಿನ ಜಯನಗರದಲ್ಲಿ ಹೋಮ್ ಕ್ವಾರಂಟೈನ್ನಲ್ಲಿದ್ದ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾಳೆ. ಪರೀಕ್ಷೆ ಬರೆದು ನಂತರ ವಿದ್ಯಾರ್ಥಿನಿಯ ಸ್ವ್ಯಾಬ್ ರಿಪೋರ್ಟ್ ಬಂದಿದ್ದು, ಕೊರೊನಾ ಇರುವುದು ದೃಢಪಟ್ಟಿದೆ.
ಕೊರೋನಾ ಕಾರಣದಿಂದಾಗಿ ಮಾರ್ಚ್ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಲಾಕ್ಡೌನ್ ನಡೆಯುವೆಯೂ ನಿನ್ನೆ ಪರೀಕ್ಷೆಯನ್ನು ನಡೆಸಲಾಗಿತ್ತು. ಜಯನಗರದ 4ನೇ ಬ್ಲಾಕ್ನ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿನಿ ಪರೀಕ್ಷೆ ಬರೆದು ಬಂದಿದ್ದಾಳೆ.
ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು. ಮನೆಯಿಂದ ಹೊರ ಬರುವಂತಿಲ್ಲ ಎಂದು ಕೈಗೆ ಮುದ್ರೆ ಒತ್ತಲಾಗಿತ್ತು. ಆದರೆ, ಆಕೆ ಆ ಮುದ್ರೆಯನ್ನು ಅಳಿಸಿ ಹಾಕಿ ಅಧಿಕಾರಿಗಳ ಕಣ್ಣು ತಪ್ಪಿಸಿ ಪರೀಕ್ಷೆಗೆ ತೆರಳಿದ್ದಾಳೆ ಎನ್ನಲಾಗಿದೆ.
ಸ್ವ್ಯಾಬ್ ರಿಪೋರ್ಟ್ ಬರಬೇಕು ಎಂಬ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೂ ಆಕೆ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆಕೆ ಪರೀಕ್ಷೆ ಬರೆದ ಪರೀಕ್ಷಾ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳಲ್ಲೂ ಆತಂಕ ಶುರುವಾಗಿದೆ. ಆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುತ್ತದೆಯೇ ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್
ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...








