ದಿ ರೆಸಿಸ್ಟೆನ್ಸ್ ಪ್ರೆಂಟ್ ಭಯೋತ್ಪಾದಕ ಸಂಘಟನೆಯ ಮೂವರು ಉಗ್ರರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಶ್ರೀನಗರದಲ್ಲಿ ಭಯೋತ್ಪಾದಕ ಚಟುವಟಿಕೆಗಳಗೆ ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ.
3 ಹ್ಯಾಂಡ್ ಗ್ರೆನೇಡ್ಗಳು, 10 ಪಿಸ್ತೂಲ್, ಗುಂಡುಗಳು, 25 ಎಕೆ-47 ಸುತ್ತುಗಳು ಮತ್ತು ಇತರ ದೋಷಾರೋಪಣೆ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶ್ರೀನಗರದ ನಾಟಿಪೋರಾ ಪ್ರದೇಶದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿಯ ಉಪಶಾಖೆಯಾದ ಟಿ ಆರ್ ಆಫ್ ನೊಂದಿಗೆ ಬಂಧಿತರು ಸಂಬಂಧ ಹೊಂದಿದ್ದರು ಎನ್ನಲಾಗಿದೆ.
ಭಯೋತ್ಪಾದಕ ಚಟುವಟಿಕೆ ನಡೆಸುವುದಕ್ಕಾಗಿ ಭಯೋತ್ಪಾದಕರಿಂದ ಮೂವರು ಸೋಟಕಗಳು ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.








