ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಪುಂಡರು ಬೆಳ್ಳಂಬೆಳ್ಳಗೆ ನಿಂತಿರುವ ಬೈಕ್ ಗಳಿಗೆ ಬೆಂಕಿ ಇಟ್ಟಿದ್ದಾರೆ.
ವಸಂತ ನಗರದಲ್ಲಿ 5 ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂವರು ಕಿಡಿಗೇಡಿಗಳಿಂದ ದುಷ್ಕೃತ್ಯ ನಡೆದಿದೆ. ಸ್ಥಳಕ್ಕೆ ಹೈಗ್ರೌಂಡ್ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.








