ನವದೆಹಲಿ: ದೆಹಲಿಯ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳು ಗಲ್ಲಿಗೇರಲು ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಇವೆ. ಈ ಮಧ್ಯೆ ಗಲ್ಲು ಶಿಕ್ಷೆಯಿಂದ ಪಾರಾಗಲು ದೋಷಿಗಳು ನಾನಾ ರೀತಿಯ ಪ್ರಯತ್ನಗಳ ಮೊರೆ ಹೋಗುತ್ತಿದ್ದಾರೆ. ನಿರ್ಭಯಾ ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಇದೀಗ ತಮ್ಮ ಕ್ಷಮಾದಾನ ಅರ್ಜಿ ತಿರಸ್ಕೃತವಾಗಿರುವ ಕ್ರಮ ಪ್ರಶ್ನಿಸಿ ಚುನಾವಣಾ ಆಯೋಗದ ಕದತಟ್ಟಿದ್ದಾರೆ.
ವಿನಯ್ ಕ್ಷಮಾದಾನ ಅರ್ಜಿಯನ್ನು ದೆಹಲಿ ಗೃಹ ಸಚಿವ ಮನೀಷ್ ಸಿಸೋಡಿಯ ತಿರಸ್ಕರಿಸಿದಾಗ ದೆಹಲಿಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿತ್ತು. ಆಗ ಅವರು ಸಚಿವರಾಗಿರಲಿಲ್ಲ. ಈ ವೇಳೆ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದು ಸರಿಯೇ? ಇದಕ್ಕೆ ಕಾನೂನಿನ ಮಾನ್ಯತೆಯಿದೆಯೆ? ಎಂದು ವಿನಯ್ ಪರ ವಕೀಲ ಎ.ಪಿ. ಸಿಂಗ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...








