ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮೃತದೇಹ ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ರಾತ್ರಿ 12.30ರ ವೇಳೆಗೆ ಮನೆಗೆ ಪಾರ್ಥಿವ ಶರೀರ ಬರಲಿದೆ ಎಂದು ಸ್ಪಂದನ ಅವರ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಮಲ್ಲೇಶ್ವರಂನಲ್ಲಿನ ಸ್ಪಂದನ ಅವರ ನಿವಾಸದ ಬಳಿ ಮಾತನಾಡಿದ ಅವರು, ಇದು ಸ್ಪಂದನ ಅವರ ನಿವಾಸಕ್ಕೆ ಮೃತದೇಹ ಬರಲಿದ್ದು, ಅಲ್ಲಿ ಪೂಜೆಯ ನಂತರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂ ಆಟದ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ನಾಳೆ ಅಂತಿಮ ದರ್ಶನಕ್ಕೆ ಮನೆಯ ಬಳಿ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಮಧ್ಯಾಹ್ನ ಶ್ರೀರಾಂಪುರ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.







