ನೌಕರಸ್ಥರು ತಮ್ಮ ಪ್ರಾಣ ಉಳಿಸಿಕೊಳ್ಳುವುದಕ್ಕಾಗಿ ಹೆಲ್ಮೆಟ್ ಧರಿಸಿ ಕೆಲಸ ಮಾಡುತ್ತಿರುವ ಘಟನೆಯೊಂದು ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ಬೀರ್ ಪುರ ಮಂಡಲದಲ್ಲಿ ನಡೆದಿದೆ.
ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಡಲ ಪರಿಷತ್ ಅಭಿವೃದ್ಧಿ ಅಧಿಕಾರಿಗಳೇ ಹೆಲ್ಮೆಟ್ ಧರಿಸಿ ಕೆಲಸ ಮಾಡುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಕಟ್ಟಡದ ದುಸ್ಥಿತಿ ಹಾಗೂ ಭದ್ರತೆಯ ದೃಷ್ಟಿಯಿಂದ ಹೆಲ್ಮೆಟ್ ಹಾಕಿಕೊಂಡು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಅಪಾಯಕಾರಿ ಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದು, ಈ ಕಟ್ಟಡದ ಅವಶೇಷಗಳು ಅವಾಗ ಅವಾಗ ಬೀಳುತ್ತಿವೆ ಎಂದು ಕಛೇರಿ ನೌಕರರು ದೂರಿದ್ದಾರೆ
ಕಚೇರಿಯ ಮೇಲ್ಛಾವಣಿ ಸೋರುತ್ತಿದ್ದು, ಶಿಥಿಲಾವಸ್ಥೆಯಲ್ಲಿದೆ. ಕಳೆದ ವರ್ಷ ಎಂಪಿಡಿಒಗಳು ಕೆಲಸ ಮಾಡುತ್ತಿರುವಾಗ ಮೇಲ್ಛಾವಣಿಯಿಂದ ಚಪ್ಪಡಿಗಳು ಬೀಳುತ್ತಿದ್ದರೂ ಅಲ್ಲಿಯೇ ಕೆಲಸ ಮಾಡಬೇಕಾದ ಅನಿವಾರ್ಯತೆಯನ್ನು ನೌಕರಸ್ಥರು ಎದುರಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಎಂಪಿಡಿಒ ಕಚೇರಿ ಸ್ಥಳಾಂತರಕ್ಕೆ ಆದೇಶ ನೀಡಿದರೂ ಇದುವರೆಗೂ ಜಾರಿಯಾಗಿಲ್ಲ. ಹೀಗಿಗ ನೌಕರಸ್ಥರು ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ಕೆಲಸ ಮಾಡುತ್ತಿದ್ದಾರೆ.








