ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ 70ಕ್ಕೂ ಅಧಿಕ ಜನರು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ನೀರಿನ ಪೈಪ್ ಒಡೆದು ಅದಕ್ಕೆ ಚರಂಡಿ ನೀರು ಸೇರಿದ್ದರ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸುಮಾರು 70ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್ ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರೂ ಅಸ್ವಸ್ಥಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಚಿತ್ತಾಪುರ ಗ್ರಾಮದಲ್ಲಿ ಪೂರೈಕೆ ಮಾಡುವ ಪೈಪ್ನಲ್ಲಿ ಚರಂಡಿ ನೀರು ಸೇರಿರುವುದ್ದರಿಂದ ಈ ಘಟನೆ ಎಂದು ಗ್ರಾಮಸ್ಥರು ದೂರಿದ್ದಾರೆ. ಘಟನೆಗೆ ಗ್ರಾಮದಲ್ಲಿ ಸ್ವಚ್ಛತೆಯಿಲ್ಲದೆ, ಚರಂಡಿ ಸ್ವಚ್ಛತೆ ಸರಿಯಾಗಿ ನಿರ್ವಹಿಸದ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.








