ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಪಾದಾಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಯುಬಿ ಸಿಟಿಯ ಸಿಗ್ನಲ್ ಹತ್ತಿರ ಇಂದು ಸಂಜೆ ನಡೆದಿದೆ. ರಸ್ತೆ ದಾಟುವ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಮುಂದಿನ ಚಕ್ರದಲ್ಲಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ವ್ಯಕ್ತಿಯ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕುರಿತು ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








