ಬೆಂಗಳೂರಿನ ಬಿಬಿಎಂಪಿ ಮುಖ್ಯ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ಜನ ನೌಕರರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಕಿಸಿಕೊಂಡಿದೆ. ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಸ್ಥಳದಲ್ಲಿ ಬಿಬಿಎಂಪಿ ನೌಕರರು ಹಾಗೂ ಸಾರ್ವಜನಿಕರು ಜಮಾಯಿಸಿದ್ದಾರೆ. ಘಟನೆ ನಡೆದು ಅರ್ಧ ಗಂಟೆ ಆದರೂ ಯಾವುದೇ ಅಗ್ನಿಶಾಮಕದಳ ಧಾವಿಸಿಲ್ಲ ಎನ್ನಲಾಗಿದೆ. ಗಾಯಾಳು ಸಿಬ್ಬಂದಿಯನ್ನು ಸೆಂಟ್ ಥಾಮರ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಿಬಿಎಂಪಿ ಕಮೀಷನರ್ ತುಷಾರ್ ಗಿರಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








