ಚಿತ್ರದುರ್ಗ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಲ್ಲಾಪುರ (Mallapura) ಗ್ರಾಮದ ಹತ್ತಿರ ಈ ಅಪಘಾತ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಸಂಗನಬಸಪ್ಪ(36), ರೇಖಾಂಶ(29), ಭೀಮಾಶಂಕರ್(26) ಹಾಗೂ ಅಗಸ್ತ್ಯ(8) ಸಾವನ್ನಪ್ಪಿದ ದುರ್ದೈವಿಗಳು. ಮೃತರೆಲ್ಲರೂ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರು. ಚಿಕ್ಕಮಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಲದ ಒಂದೇ ಕುಟುಂಬದವರು.
ವಿಜಯಪುರದಿಂದ 9Vijayapura) ಚಿಕ್ಕಮಗಳೂರಿಗೆ (Chikkamagaluru) ತೆರಳುವ ವೇಳೆ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಅವಘಡದಲ್ಲಿ ಆದರ್ಶ(3), ಪುತ್ರಿ ಅನ್ವಿಕಾ(5) ಹಾಗೂ ಚಾಲಕ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.








