ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಒಳಗಾಗಿರುವ ಖಾಸಗಿ ಬಸ್, ಕ್ಯಾಬ್, ರಿಕ್ಷಾ ಚಾಲಕರಿಗೆ ಪರಿಹಾರ ಘೋಷಣೆ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.
ಖಾಸಗಿ ಸಾರಿಗೆ ಉದ್ಯಮ ವಿವಿಧ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರದಿಂದ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳು ಹಾಗೂ ಸಾರಿಗೆ ಉದ್ಯಮದ ನ,ಟದ ಕುರಿತು ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆ ಸೂಚನೆ ನೀಡಿದ್ದು, ವರದಿ ಆಧರಿಸಿ ಪರಿಹಾರ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೊರೊನಾ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾರಿಗೆ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರದ ಶಕ್ತಿ ಯೋಜನೆಯ ಉಚಿತ ಪ್ರಯಾಣದಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ.
ಖಾಸಗಿ ಬಸ್, ಕ್ಯಾಬ್, ಆಟೋಗಳಿಗೆ ಪ್ರಯಾಣಿಕರ ತೀವ್ರ ಕೊರತೆ ಎದುರಾಗಿ ನ,ಟಕ್ಕೊಳಗಾಗಿದೆ. ಹೀಗಾಗಿ ಪರಾಹರ ನೀಡಬೇಕೆಂದು ಸಂಘಟನೆಗಳು ಹೋರಾಟ ನಡೆಸಿದ್ದವು. ಹೀಗಾಗಿ ಪರಿಹಾರ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.








