ತುಮಕೂರು : ಇಲ್ಲಿಯ ಸಿದ್ದಗಂಗಾ ಮಠದ ಹಿಂಭಾಗದ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ನಾಲ್ವರು ನೀರು ಪಾಲಾಗಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಶಂಕರ್ (11), ರಕ್ಷಿತ್ (11), ಲಕ್ಷ್ಮಿ (50) ಹಾಗೂ ಮಹಾದೇವಪ್ಪ (51) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ವಿದ್ಯಾರ್ಥಿಗಳಾದ ಶಂಕರ್ ಹಾಗೂ ರಕ್ಷಿತ್ ಈಜಲು ಹೋಗಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಅವರನ್ನು ರಕ್ಷಿಸಲು ಲಕ್ಷ್ಮಿ ಹಾಗೂ ಮಹದೇವಪ್ಪ ಧಾವಿಸಿದಾಗ ಅವರು ಕೂಡ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಶಂಕರ್ ಹಾಗೂ ರಕ್ಷಿತ್ ರಾಮನಗರ ನಿವಾಸಿಗಳಾಗಿದ್ದರೆ, ಲಕ್ಷ್ಮೀ ನೆಲಮಂಗಲ ಹಾಗೂ ಮಹಾದೇವಪ್ಪ ಯಾದಗಿರಿ ನಿವಾಸಿ ಎನ್ನಲಾಗಿದೆ. ಅದೃಷ್ಟವಶಾತ್ ಮತ್ತೋರ್ವ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.








