ಮಂಡ್ಯ : ಹೃದಯಾಘಾತದಿಂದ 24 ವರ್ಷದ ಯುವ ನಟ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಮೃತ ನಟ ಪವನ್ ಎನ್ನಲಾಗಿದೆ. ಸಾವನ್ನಪ್ಪಿದ ವ್ಯಕ್ತಿ ಮೂಲತಃ ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರು ಎನ್ನಲಾಗಿದೆ. ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬಯಿನಲ್ಲಿ (Mumbai) ನೆಲೆಸಿದ್ದರು ಎಂದು ತಿಳಿದು ಬಂದಿದೆ.
ಪವನ್ ಹಿಂದಿ ಹಾಗೂ ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ಹೆಸರು ಮಾಡಿದ್ದರು. ಬೆಳ್ಳಿ ತೆರೆ ಚಿತ್ರಗಳಲ್ಲಿ ಅಭಿನಯಿಸುವ ಕನಸು ಕೂಡ ಕಂಡಿದ್ದರು. ಪವನ್ ಗುರುವಾರ ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಟನ ಹುಟ್ಟೂರಿನಲ್ಲಿ ಯುವ ನಟನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳಿಂದ ತಿಳಿಸಿದೆ.








