ಮಿಜೋರಾಂನಲ್ಲಿ ಕುರುಂಗ್ ನದಿಯ ಮೇಲೆ ನಿರ್ಮಾಣಗೊಳ್ಳುತ್ತಿದ್ದ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದಿದ್ದು, ಸ್ಥಳದಲ್ಲಿ ಕನಿಷ್ಠ 17 ಜನ ಸಾವನ್ನಪ್ಪಿದ್ದಾರೆ.
ಸಾಯಿರಾಂಗ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಾಗ 35-40 ಕಾರ್ಮಿಕರು ಸ್ಥಳದಲ್ಲಿದ್ದ ಕಾರಣ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯದ ಮಾಹಿತಿಯಂತೆ 17 ಜನ ಸಾವನ್ನಪ್ಪಿರುವ ಖಚಿತ ಮಾಹಿತಿ ಸಿಕ್ಕಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿರುವ ಸಬ್ಯಸಾಚಿ ಡಿ ಹೇಳಿದ್ದಾರೆ.
ಅಪಘಾತ ಸಂಭವಿಸಿದಾಗ ಸುಮಾರು 35-40 ಕಾರ್ಮಿಕರು ಸ್ಥಳದಲ್ಲಿದ್ದರು ಹಾಗೂ 17 ಜನ ಸಾವನ್ನಪ್ಪಿದ್ದಾರೆ ಎಂದು ಗೃಹ ಸಚಿವ ಲಾಲ್ಚಾಮ್ಲಿಯಾನಾ ಹೇಳಿದ್ದಾರೆ. ಅವಶೇಷಗಳಿಂದ ಇದುವರೆಗೆ ಹದಿನೇಳು ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.








