ಬೆಂಗಳೂರು: 5 ವರ್ಷಗಳ ಅವಧಿ ಪೂರ್ಣಗೊಂಡ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೊನಾ ಮಾಹಾಮಾರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯಿತಿಯ ಹಣಕಾಸಿನ ವ್ಯವಹಾರಗಳನ್ನು ಆಡಳಿತಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಂಟಿಯಾಗಿ ನಿರ್ವಹಣೆ ಮಾಡಬೇಕು. ವಾರ್ಡ್ ಸಭೆ ಮತ್ತು ಗ್ರಾಮಸಭೆಗಳನ್ನು ಕಾಲ ಕಾಲಕ್ಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಕೊರೊನಾ ಹರಡದಂತೆ ನೋಡಿಕೊಳ್ಳಲು ರಚಿಸಲಾಗಿರುವ ಕಾರ್ಯಪಡೆಯ ಕರ್ತವ್ಯಗಳನ್ನು ನಿರ್ವಹಣೆ ಮಾಡಬೇಕು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಂಥಾಲಯಗಳ ನಿರ್ವಹಣೆ ಹಾಗೂ ಮೇಲ್ವಿಚಾರಕರಿಗೆ ಗೌರವಧನ ವಿತರಣೆ ಮಾಡಬೇಕು. ಜತೆಗೆ ಗ್ರಾಮ ಪಂಚಾಯಿತಿ ನೌಕರರಿಗೆ ಮಾಸಿಕ ಕನಿಷ್ಠ ವೇತನ ನೀಡಬೇಕು. ಈ ಅವಧಿಯಲ್ಲಿ ಗ್ರಾಮ ಪಂಚಾಯತಿಗಳು ಯಾವುದೇ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಚನ್ನಪಟ್ಟಣ ಚುನಾವಣೆ ಫಲಿತಾಂಶದ ಬಗ್ಗೆ ಡಿಕೆಶಿ ಮಾತು
ಚುನಾವಣಾ ಪ್ರಕ್ರಿಯೆಗೂ ಮೊದಲು ಅಥವಾ ನಂತರ ಪ್ರಸಾರವಾಗುವ ಎಕ್ಸಿಟ್ ಪೋಲ್ ಫಲಿತಾಂಶಗಳು ಕೇವಲ ಮುನ್ಸೂಚನೆ ಮಾತ್ರ. ಇದು ಜನರ ಮನೋಭಾವವನ್ನು ಪ್ರತಿಬಿಂಬಿಸಬಹುದು, ಆದರೆ ಎಲ್ಲವೂ ಸತ್ಯವಾಗಿ ಮತದಾನ...