ಕಲಬುರಗಿ: ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಿಡಿಲಿಗೆ 11 ಮೇಕೆಗಳು ಹಾಗೂ ಇನ್ನೊಂದು ಪ್ರಕರಣದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ತಾಪುರ ತಾಲೂಕಿನ ರಾಜೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಶಿವಪ್ಪ ಪೂಜಾರಿ ಎಂಬುವವರಿಗೆ ಸೇರಿದ್ದ 11 ಮೇಕೆಗಳು ಮರದ ಕೆಳಗೆ ಆಶ್ರಯ ಪಡೆದಿದ್ದವು. ಈ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿವೆ. ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ. ಕಲಾವತಿ ಮೃತ ಮಹಿಳೆ. ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.








