ಜಿ-20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಭಾಗವಹಿಸದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈ ವಾರ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿರುವುದಾಗಿ ಅವರೇ ಹೇಳಿದ್ದಾರೆ.
ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಜೋ- ಬೈಡನ್ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಅಲ್ಲದೇ, ಶೃಂಗಸಭೆಯ ಭಾಗವಾಗಿ ಸೆಪ್ಟೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್ 9 ಹಾಗೂ 10 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಶೃಂಗಸಭೆಯಲ್ಲಿ ಜಿ 20 ನಾಯಕತ್ವಕ್ಕಾಗಿ ಪ್ರಧಾನಿ ಮೋದಿ ಅವರನ್ನು ಬೈಡನ್ ಶ್ಲಾಘಿಸುತ್ತಾರೆ ಎಂದು ಶ್ವೇತಭವನವು ಈ ವಾರದ ಆರಂಭದಲ್ಲಿ ತಿಳಿಸಿತ್ತು.
ಚೀನಾದೊಂದಿಗಿನ ಸಂಬಂಧವನ್ನು ಸರಿಪಡಿಸಲು ಅಮೆರಿಕ ಪ್ರಯತ್ನಿಸುತ್ತಿರುವಾಗ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾಗವಹಿಸದಿರುವ ಕುರಿತು ಜೋ- ಬೈಡನ್ ನಿರಾಶೆ ವ್ಯಕ್ತಪಡಿಸಿದ್ದಾರೆ