ಚಿಕ್ಕಮಗಳೂರು: ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಹತ್ಯೆ ಮಾಡಿದ್ದಲ್ಲದೇ, ಠಾಣೆಗೆ ಪತಿಯೇ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಘಟನೆ ಚಿಕ್ಕಮಗಳೂರು (Chikkamagalur) ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಆರೋಪಿ ಪತಿ ಶಬ್ಬೀರ್ ಅಹ್ಮದ್ ಕೊಲೆ ಮಾಡಿರುವ ಆರೋಪಿ.
ಆರೋಪಿಯು ದೊಣ್ಣೆಯಿಂದ ಹೊಡೆದು ಪತ್ನಿ ಶಮಭಾನು(34) ಎಂಬುವವರನ್ನು ಕೊಲೆ ಮಾಡಿದ್ದಾನೆ. ಒಂದು ವರ್ಷದ ಹಿಂದೆ ಶಮಭಾನು ಅವರನ್ನು ಶಬ್ಬೀರ್ ಮದುವೆಯಾಗಿದ್ದರು. ಆದರೆ, ಈಗ ಪತಿಯೇ ಕೊಲೆ ಮಾಡಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








