ರಾಜ್ಯದ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಹಾಗೂ ಜನ – ಜಾನುವಾರು ಸಂಕಷ್ಟ ಅನುಭವಿಸುವಂತಾಗಿದೆ.
ಕೈಕೊಟ್ಟಿದ್ದರಿಂದ ಕರ್ನಾಟಕದಾದ್ಯಂತ ಬರದ (drought) ಛಾಯೆ ಆವರಿಸಿದ್ದು, ರಾಜ್ಯದ 195 ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಘೋಷಣೆ ಮಾಡಿದೆ. ಹೀಗಾಗಿ ಹಂಪಿ ಉತ್ಸವಕ್ಕೂ(Hampi Utsav) ಬರದ ಹೊಡೆತ ತಟ್ಟಿದೆ. ಹೀಗಾಗಿ ವಿಶ್ವ ವಿಖ್ಯಾತ ಹಂಪಿ ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಂಪಿ ಉತ್ಸವವನ್ನು ನವೆಂಬರ್ ಬದಲಾಗಿ ಫೆಬ್ರವರಿಯಲ್ಲಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿಜಯನಗರ- ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂದು ಚರ್ಚೆಯಲ್ಲಿ ಅಭಿಪ್ರಾಯ ಕೇಳಿ ಬಂದಿದೆ.
ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಈ ಮೊದಲು ನವೆಂಬರ್ನಲ್ಲಿ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.








