ಮಡಿಕೇರಿ : ಇಬ್ಬರು ಅಪ್ರಾಪ್ತೆಯರನ್ನು ಹಿಂದೂ ಹುಡುಗಿಯರನ್ನು ಅಪಹರಣ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಕೊಡಗಿನಲ್ಲಿ (Kodagu) ಭಾರೀ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ .ಸದ್ಯ ಅಪಾಪ್ರ ಬಾಲಕಿಯರನ್ನು ರಕ್ಷಿಸಲಾಗಿದ್ದು, ನಾಲ್ವರು ಯುವಕರನ್ನು ಬಂಧಿಸಲಾಗಿದೆ. ಅಪಹರಣಕ್ಕೆ ಒಳಗಾಗಿದ್ದ ಓರ್ವ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಬಾಲಕಿಯರು ಮಡಿಕೇರಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು ಎನ್ನಲಾಗಿದೆ. ಅಪಹರಣ ಮಾಡಿದ ಯುವಕರನ್ನು ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಎಂದು ಗುರುತಿಸಲಾಗಿದೆ. ಬಂಧಿತರೆಲ್ಲ ಮಡಿಕೇರಿಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಈ ಪಾಪಿಗಳನ್ನು ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ಬಂಧಿಸಿದ್ದಾರೆ.
ಪಿಯು ವಿದ್ಯಾರ್ಥಿನಿಯರು ಎಂದಿನಂತೆ ಮಡಿಕೇರಿಯ ಸರ್ಕಾರಿ ಕಾಲೇಜಿಗೆ ತೆರಳುತ್ತಿದ್ದರು. ಆಗ ಕಾರಿನಲ್ಲಿ ಬಂದ ನಾಲ್ವರು ಯುವಕರು ಅವರನ್ನು ಬಲವಂತವಾಗಿ ಕಾರಿಗೆ ಹಾಕಿಕೊಂಡು ಹೋಗಿದ್ದಾರೆ ಎಂಬ ಸುದ್ದಿ ಒಮ್ಮಿಂದೊಮ್ಮೆಗೆ ಹರಡಿತ್ತು. ಇದನ್ನು ಕಂಡ ಹಲವು ಯುವತಿಯರು ಊರಲ್ಲಿ ಹಾಗೂ ಶಿಕ್ಷಕರಿಗೆ ತಿಳಿಸಿದ್ದಾರೆ.
ತಕ್ಷಣ ಕಾಲೇಜಿನ ಶಿಕ್ಷಕರು ಪೋಲಿಸರಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದ್ದು ಕಾಣೆಯಾದ ಹುಡುಗಿಯರ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ಪೊಲೀಸರು ಮಂಡಿ ಮೊಹಲ್ಲಾಕ್ಕೆ ದಾಳಿ ಮಾಡಿ 4 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಕುಶಾಲನಗರದಲ್ಲಿ ಕಾರಿನಿಂದ ಇಳಿದು ಬಸ್ ಮೂಲಕ ಮಡಿಕೇರಿಗೆ ಬಂದು ಅಲ್ಲಿಂದ ತಮ್ಮ ಮನೆಗೆ ಹೋಗಿದ್ದ ಇಬ್ಬರು ಹುಡುಗಿಯರ ಪೈಕಿ ಒಬ್ಬಾಕೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಘಟನೆಯಿಂದ ಅವಮಾನವಾಗಿದೆ ಎಂದು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ








